ಕಂಬಳ ಕ್ರೀಡೆಗೆ ಬಿಜೆಪಿ ಬೆಂಬಲ, ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗಳ್ಳಬೇಕು: ಯಡಿಯೂರಪ್ಪ

ತಮಿಳುನಾಡಿನ ಜನರ ಹೋರಾಟದ ಫಲವಾಗಿ ಅಲ್ಲಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಚರಿಸಲು ಸುಗ್ರೀವಾಜ್ಞೆ ತಂದು ಅವಕಾಶ ನೀಡಲಾಗಿದೆ.ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಅನುಮತಿ ನೀಡುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ತಮಿಳುನಾಡಿನ ಜಲ್ಲಿಕಟ್ಟುಗೆ ಸಿಕ್ಕ ಅನುಮತಿ ನಮಗೇಕಿಲ್ಲ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಜಲ್ಲಿಕಟ್ಟು ಕ್ರೀಡೆಯ ನಿಷೇಧವನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆಗೆ ಸಿನಿಮಾ ನಟರು ಸೆರಿದಂತೆ ವಿವಿಧ ವರ್ಗಗಳಿಂದ ಬೆಂಬಲ ವ್ಯಕ್ತವಾಗಿತ್ತು. ಇದರ ಜೊತೆಗೆ ಅಲ್ಲಿನ ಮುಖ್ಯಮಂತ್ರಿ ಮತ್ತು ಸಂಸದರು ದೆಹಲಿಗೆ ತೆರಳಿ ಜಲ್ಲಿಕಟ್ಟು ಆಚರಣೆಗೆ ಅನುಕೂಲವಾಗುವಂತೆ ಸುಗ್ರೀವಾಜ್ಞೆ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಬಿಜೆಪಿ ಬೆಂಬಲಿಸುವುದಾಗಿ ಹೇಳಿದೆ. ಕಂಬಳ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿರುವ ಯಡಿಯೂರಪ್ಪ, ಬಿಜೆಪಿಯು ಕಂಬಳಕ್ಕೆ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.