ಉತ್ತರ ಪ್ರದೇಶದ ಮುಖ್ಯಮಂತ್ರಿ ಘೋಷಣೆ ಇಂದು

ಭಾರತೀಯ ಜನತಾ ಪಕ್ಷ (BJP)ದ ನೂತನ ಶಾಸಕರು ಇಂದು ಸಂಜೆ ಉತ್ತರ ಪ್ರದೇಶದ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಇಂದು ಸಂಜೆ 5 ಗಂಟೆಗೆ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯಾರೆಂಬ ಊಹಾಪೋಹಗಳಿಗೆ ತೆರೆ ಬೀಳಲಿದೆ. ಕೇಂದ್ರ ಸಚಿವ ವೆಂಕಯ್ಯನಾಯ್ಡು ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೆಲ ಮೂಲಗಳ ಪ್ರಕಾರ ಮುಖ್ಯಮಂತ್ರಿಯಾಗಿ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿದ್ದು, ಅವರ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Loading...

Leave a Reply

Your email address will not be published.

error: Content is protected !!