Big Breaking News
ಚಿತ್ರ ಕೃಪೆ: ಸುವರ್ಣ ನ್ಯೂಸ್

ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಉಪನ್ಯಾಸಕಿ

ಬೆಂಗಳೂರು: ಹಿರಿಯ ಪ್ರೊಫೆಸರ್ ಕಿರುಕುಳದಿಂದ ನೊಂದ ಬೆಂಗಳೂರು ವೈದ್ಯಕೀಯ ಕಾಲೇಜು ಸಂಶೋಧನಾ ಕಾಲೇಜಿನ ಉಪನ್ಯಾಸಕಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೆಪ್ಟೆಂಬರ್ 17 ರಂದು ನಡೆದಿದ್ದು, ಘಟನೆ ಶನಿವಾರ ಬೆಳಕಿಗೆ ಬಂದಿದೆ. ಡೆತ್ ನೋಟ್ ಬರೆದಿಟ್ಟು ನಂತರ ಮಮತಾ ಅತ್ಮಹತ್ಯೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಉಪನ್ಯಾಸಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Download Free

40 ವರ್ಷದ ಮಮತಾ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ್ದು, ಅವರು ಕಾಲೇಜಿನ ನಿರ್ದೇಶಕರಿಗೆ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಅದೇ ಕಾಲೇಜಿನ ಹಿರಿಯ ಪ್ರೊಫೆಸರ್ ಹೇಮಾವತಿ ಮತ್ತೊಬ್ಬ ಹಿರಿಯ ಪ್ರೊಫೆಸರ್ ವಿರುದ್ಧ ಆರೋಪಿಸಿದ್ದಾರೆ. ಪ್ರೊಫೆಸರ್ ಹೇಮಾವತಿ ಅವರು ತನಗೆ ಸದಾ ಕಿರುಕುಳ ನೀಡುತ್ತಿದ್ದು, ಇತ್ತೀಚೆಗೆ ವಿದ್ಯಾರ್ಥಿಗಳು ಹಾಗೂ ಇತರ ಉಪನ್ಯಾಸಕರ ಎದುರು ನಿಂಧಿಸಿದ್ದರು ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡೆತ್ ನೋಟ್ ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ತೀವ್ರ ಅಸ್ವಸ್ತರಾಗಿರುವ ಮಮತಾ ಈಗ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments (wait until it loads)
loading...
class="clear">
error: Content is protected !!

News Mirchi is Stephen Fry proof thanks to caching by WP Super Cache