ಕುಸಿದ ನಿರ್ಮಾಣ ಹಂತದ ಕಟ್ಟಡ, ನಾಲ್ವರು ಕಾರ್ಮಿಕರ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಘಟನೆ ನಗರದ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಡೆದಿದೆ. ಕಟ್ಟಡದ ಅವಶೇಷಗಳಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಅನುಮಾನವಿದೆ. ಕಟ್ಟಡದೊಳಗೆ ಮೇಸ್ತ್ರಿಯೂ ಸಿಲುಕಿರುವ ಕಾರಣ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ.

ಇದುವರೆಗೂ ನಾಲ್ವರು ಸಾವನ್ನಪ್ಪಿದ್ದು, 12 ಜನ ಗಾಯಗೊಂಡಿರುವುದು ವರದಿಯಾಗಿದೆ. ಇನ್ನು ಅವಶೇಷಗಳಲ್ಲಿ ಸಿಲುಕಿದ್ದ ಐವರು ಕಾರ್ಮಿಕರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜೆ.ಡಿ.ಎಸ್ ಎರಡನೇ ವಿಕೆಟ್ ಪತನ, ಸುಧಾಕರ್ ಬಣ ಸೇರಿದ ಜಬೀನಾ ತಾಜ್

ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಚರಣೆ ಮುಂದುವರೆಸಿದ್ದಾರೆ. ರಫೀಕ್ ಎಂಬುವವರಿಗೆ ಸೇರಿದ ಈ ಕಟ್ಟಡಕ್ಕೆ ಕೇವಲ 2 ಅಂತಸ್ತುಗಳಿಗೆ ಬಿಬಿಎಂಪಿಯಿಂದ ಅನುಮತಿ ಪಡೆಯಲಾಗಿದ್ದು, ಈಗ ನಿಯಮಗಳಿಗೆ ವಿರುದ್ಧವಾಗಿ ಹೆಚ್ಚುವರಿಯಾಗಿ ಮೂರು ಅಂತಸ್ತುಗಳನ್ನು ನಿರ್ಮಿಸುತ್ತಿದ್ದರು ಎನ್ನಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್, ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹೊಟ್ಟೆಗೆ ಒದ್ದ ಸಿಪಿಎಂ ನಾಯಕ, ಮಹಿಳೆಗೆ ಗರ್ಭಪಾತ

ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿ ಕಾರಣವೆನ್ನಲಾಗುತ್ತಿದ್ದು, ಕಟ್ಟಡದ ಮಾಲೀಕ ರಫೀಕ್ ಮತ್ತು ಇಂಜಿನಿಯರ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Get Latest updates on WhatsApp. Send ‘Subscribe’ to 8550851559