ನ್ಯಾಯಾಧೀಶರ ವೇತನ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ – News Mirchi

ನ್ಯಾಯಾಧೀಶರ ವೇತನ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ವೇತನವನ್ನು ಹೆಚ್ಚಳ ಮಾಡುವ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಎರಡು ಮಸೂದೆಗಳನ್ನು ಮಂಡಿಸಲಾಗುವುದು ಎಂದು ಕೇಂದ್ರ ಕೂನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಜನವರಿ 1, 2016 ರಿಂದ ಅನ್ವಯವಾಗುವಂತೆ ಹೆಚ್ಚಳವಾದ ವೇತನ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಜಾರಿಗೆ ಬರಲಿದೆ ಎಂದು ಅವರು ಹೇಳಿದರು.

ಇದರಿಂದಾಗಿ 31 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, 1,079 ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು 2500 ನಿವೃತ್ತ ನ್ಯಾಯಾಧೀಶರಿಗೆ ಅನುಕೂಲವಾಗಲಿದೆ. ಸದ್ಯ ಸುಪ್ರೀಂ ಕೋರ್ಟ್ 25 ನ್ಯಾಯಮೂರ್ತಿಗಳನ್ನು ಹೊಂದಿದ್ದು, ಹೈಕೋರ್ಟ್ ಗಳು 682 ನ್ಯಾಯಮೂರ್ತಿಗಳನ್ನು ಹೊಂದಿದೆ.

ಇದನ್ನೂ ಓದಿ: ಜಯಾ ಸತ್ತ ನಂತರ ಬೆರಳಚ್ಚು ಪಡೆದಿದ್ದರಾ?

ಪ್ರಸ್ತಾವನೆ ಪ್ರಕಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ತಿಂಗಳಿಗೆ ರೂ.2.8 ಲಕ್ಷ ವೇತನ ಪಡೆಯಲಿದ್ದಾರೆ. ಸುಪ್ರೀಂ ಕೋರ್ಟ್ ಇತರೆ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರೂ.2.5 ಲಕ್ಷ ವೇತನ ಪಡೆಯಲಿದ್ದಾರೆ. ಹೈಕೋರ್ಟ್ ನ ಉಳಿದ ನ್ಯಾಯಮೂರ್ತಿಗಳು ಪ್ರತಿ ತಿಂಗಳು ರೂ.2.25 ಲಕ್ಷ ಪಡೆಯಲಿದ್ದಾರೆ.

Get Latest updates on WhatsApp. Send ‘Add Me’ to 8550851559

Loading...