ನೀರಿಗಾಗಿ ತಮಿಳುನಾಡು ಕ್ಯಾತೆ, ಸಾಧ್ಯವೇ ಇಲ್ಲವೆಂದ ಕರ್ನಾಟಕ – News Mirchi

ನೀರಿಗಾಗಿ ತಮಿಳುನಾಡು ಕ್ಯಾತೆ, ಸಾಧ್ಯವೇ ಇಲ್ಲವೆಂದ ಕರ್ನಾಟಕ

ಬೆಂಗಳೂರು: ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಮತ್ತೆ ತಮಿಳುನಾಡು ಕ್ಯಾತೆ ತೆಗೆದಿದೆ. ಆದರೆ ಜಲಾಶಯದಲ್ಲಿ ನೀರಿನ ಕೊರತೆಯಿರುವ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಇಂದು ಶಕ್ತಿಭವನದಲ್ಲಿ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ 13 ಟಿಎಂಸಿ ನೀರು ಹರಿಸುವುದು ಬಾಕಿ ಇದ್ದು, ಕೂಡಲೇ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಅಧಿಕಾರಿಗಳು ಒತ್ತಾಯಿಸಿದ್ದರು.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಪ್ರತಿ ದಿನ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿತ್ತು. ಸದ್ಯದ ಪರಿಸ್ಥಿತಿಯಲ್ಲಿ ನೀರು ಹರಿಸಲು ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ತೀರ್ಪು ಮಾರ್ಪಾಡು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತದೆ ಎನ್ನಲಾಗಿದೆ.

Loading...

Leave a Reply

Your email address will not be published.