ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾ. ಅಮರಿಂದರ್ ಸಿಂಗ್ ಪ್ರಮಾಣವಚನ

ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಇಂದು ಕಾಂಗ್ರೆಸ್ ನ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜ್ಯದ 26 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರು ಚಂಡೀಘಡದ ರಾಜಭವನದಲ್ಲಿ ಅಮರಿಂದರ್ ಸಿಂಗ್ ರವರಿಗೆ ಗೋಪ್ಯತೆಯ ಪ್ರಮಾಣವಚನ ಬೋಧಿಸಿದರು. ನವಜೋತ್ ಸಿಂಗ್ ಸಿಧು ಮತ್ತು ಮನ್ಪ್ರೀತ್ ಸಿಂಗ್ ಬಾದಲ್ ರವರೂ ಇದೇ ಸಂದರ್ಭದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರಸಿಂಗ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡ ಫಾರೂಖ್ ಅಬ್ದುಲ್ಲಾ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ ಉಪಸ್ಥಿತರಿದ್ದರು.

Loading...

Leave a Reply

Your email address will not be published.

error: Content is protected !!