ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದ ದ್ವಾರಕಾನಾಥ್ ವಿರುದ್ಧ ದೂರು ದಾಖಲು – News Mirchi

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದ ದ್ವಾರಕಾನಾಥ್ ವಿರುದ್ಧ ದೂರು ದಾಖಲು

ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಅಸ್ತಿತ್ವವನ್ನು ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಗತಿಪರ ಚಿಂತಕರೆಂದು ಕರೆಯಲಾಗುವ ಸಿ.ಎಸ್.ದ್ವಾರಕಾನಾಥ್ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ಹಿಂದೂ ಸಂಘಟನೆ ಮುಖಂಡ ಗಣೇಶ್ ಶೆಟ್ಟಿ ಕಲ್ಲಡ್ಕ ಎಂಬುವವರು ದೂರು ದಾಖಲಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕುರಿತು ಮಂಗಳವಾರ ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ದ್ವಾರಕಾನಾಥ್, ಶ್ರೀರಾಮ ಬದುಕಿದ್ದನೆಂಬುದಕ್ಕೆ ಸಾಕ್ಷಿಯಿಲ್ಲ ಎಂದು ಹೇಳಿದ್ದರು. ಇತಿಹಾಸದಲ್ಲಿ ಬುದ್ಧ, ಕ್ರಿಸ್ತ ಮತ್ತು ಪೈಗಂಬರ್ ಮೂವರು ಮಹಾತ್ಮರಿದ್ದರೆಂಬುದಕ್ಕೆ ಪುರಾವೆಗಳಿವೆ. ಆದರೆ ಶ್ರೀರಾಮನ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಯಾವುದೇ ಆಧಾರಗಳಿಲ್ಲ. ರಾಮನ ಅಸ್ತಿತ್ವವಿತ್ತು ಎಂದು ಸುಮ್ಮನೆ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ದ್ವಾರಕಾನಾಥ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇನ್ನು ದ್ವಾರಕಾನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಜನರ ನಂಬಿಕೆಗೆ ಘಾಸಿಯುಂಟು ಮಾಡಬಾರದು. ಇಂತದ್ದೇ ಹೇಳಿಕೆಗಳನ್ನು ಇತರೆ ಧರ್ಮಗಳ ಕುರಿತು ಹೇಳುತ್ತೀರಾ ಎಂದು ಪ್ರಶ್ನಿಸಿದ್ದಾರೆ.

Get Latest updates on WhatsApp. Send ‘Subscribe’ to 8550851559

Loading...