ಕರ್ನಾಟಕಕ್ಕೆ 795 ಕೋಟಿ ಬರ ಪರಿಹಾರ ಪ್ರಕಟಿಸಿದ ಕೇಂದ್ರ ಸರ್ಕಾರ |News Mirchi

ಕರ್ನಾಟಕಕ್ಕೆ 795 ಕೋಟಿ ಬರ ಪರಿಹಾರ ಪ್ರಕಟಿಸಿದ ಕೇಂದ್ರ ಸರ್ಕಾರ

ಬರಗಾಲದಿಂದ ತತ್ತರಿಸಿರುವ ಕರ್ನಾಟಕದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ರೂ.795.54 ಕೋಟಿ ರೂಪಾಯಿ ಪರಿಹಾರ ಪ್ರಕಟಿಸಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಸಚಿವ ರಾಧಾ ಮೋಹನ್ ಮುಂತಾದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಉನ್ನತ ಮಟ್ಟದ ಸಮಿತಿಯು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕರ್ನಾಟಕ್ಕೆ ನೆರವು ನೀಡಲು ಅನುಮೋದನೆ ನೀಡಿದ್ದು, ಇದರಂತೆ ಕರ್ನಾಟಕವು ರೂ.795.54 ಕೋಟಿ ನೆರವು ಪಡೆಯಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಘೋಷಿಸಿರುವ ಪರಿಹಾರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ ಮತ್ತು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ರಾಜ್ಯ ಸರ್ಕಾರ ರೂ.3,310 ಕೋಟಿಗಳಿಗೆ ಬೇಡಿಕೆ ಇಟ್ಟಿದ್ದು, ಈಗ ಕೇಂದ್ರ ಘೋಷಿಸಿರುವುದು ತುಂಬಾ ಕಡಿಮೆಯಾಯಿತು ಎಂದು ಹೇಳಿದ್ದಾರೆ. ಘೋಷಿಸಿರುವ ಮೊತ್ತವನ್ನು ಬಿಡುಗಡೆ ಮಾಡುವಲ್ಲಿ ವಿಳಂಬವಾಗುವುದಿಲ್ಲ ಎಂಬ ಭರವಸೆ ಇದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

Loading...
loading...
error: Content is protected !!