ಪಟೇಲ್ ಜಯಂತಿಯನ್ನು ಅದ್ಧೂರಿಯಾಗಿ ನಡೆಸಿ: ರಾಜ್ಯಗಳಿಗೆ ಕೇಂದ್ರದ ಪತ್ರ – News Mirchi

ಪಟೇಲ್ ಜಯಂತಿಯನ್ನು ಅದ್ಧೂರಿಯಾಗಿ ನಡೆಸಿ: ರಾಜ್ಯಗಳಿಗೆ ಕೇಂದ್ರದ ಪತ್ರ

ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿಯನ್ನು ಈ ತಿಂಗಳು 31 ರಂದು ಅದ್ದೂರಿಯಾಗಿ ನಡೆಸುವಂತೆ ಸೂಚಿಸಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರಗಳನ್ನು ಬರೆದಿದೆ. ಅಂದು ದೆಹಲಿಯಲ್ಲಿರುವ ಸರ್ದಾರ್ ಪಟೇಲ್ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸುತ್ತಾರೆ. ಇದಾದ ನಂತರ ಏಕತೆಯ ಓಟಕ್ಕೆ ಅವರು ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಕತೆಯ ಓಟ ಆಯೋಜಿಸಲು ಸೂಚನೆ

ಸರ್ದಾರ್ ಪಟೇಲ್ ಹುಟ್ಟುಹಬ್ಬ ದಿನದಂದು ಏಕತೆಯ ಓಟವನ್ನು ಆಯೋಜಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಿಗೆ ಪತ್ರಗಳನ್ನು ಬರೆದಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಓಟದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳುಬೇಕೆಂದು ರಾಜನಾಥ್ ಸಿಂಗ್ ಈ ಪತ್ರಗಳಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ 1.5 ಕಿ.ಮೀ ದೂರ ನಡೆಯುವ ಈ ಓಟದಲ್ಲಿ ಕ್ರೀಡಾಕಾರರಾದ ಪಿ.ವಿ.ಸಿಂಧೂ, ಮಿಥಾಲಿರಾಜ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

Get Latest updates on WhatsApp. Send ‘Add Me’ to 8550851559

Contact for any Electrical Works across Bengaluru

Loading...
error: Content is protected !!