ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪಾಸ್ ಪೋರ್ಟ್ ಸೇವಾ ಕೇಂದ್ರ – News Mirchi

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪಾಸ್ ಪೋರ್ಟ್ ಸೇವಾ ಕೇಂದ್ರ

ಪಾಸ್ ಪೋರ್ಟ್ ಗಾಗಿ ನೂರಾರು ಕಿ.ಮೀ ದೂರ ಪ್ರಯಾಣಿಸುವ ಅಗತ್ಯವಿಲ್ಲ. ಜಿಲ್ಲಾ ಕೇಂದ್ರಗಳಲ್ಲಿಯೇ ಪಾಸ್ಪೋರ್ಟ್ ಸೇವೆಗಳನ್ನು ಪಡೆಯಬಹುದು. ಈ ವರ್ಷ 150 ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು,  ಮುಂದಿನ ಎರಡು ವರ್ಷಗಳಲ್ಲಿ ದೇಶಾದ್ಯಂತ 800 ಅಂಛೆ ಕಛೇರಿಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಪ್ರಕಟಿಸಿದೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ವಿ.ಕೆ.ಸಿಂಗ್ ಮಂಗಳವಾರ ಮಾಧ್ಯಮಗಳಿಗೆ ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿ ಮೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಚರ್ಚೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿ.ಕೆ.ಸಿಂಗ್, ಈ ವರ್ಷ ದೇಶಾದ್ಯಂತ 150 ಪಾಸ್ಪೋರ್ಟ್ ಸೇವಾ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಪ್ರಧಾನ ಅಂಛೆ ಕಛೇರಿಗಳಲ್ಲಿ ಇನ್ನೂ 800 ಓಪನ್ ಪಾಸ್ ಪೋರ್ಟ್ ಸೇವಾ ಕೇಂದ್ರ ತೆರೆಯುವುದಾಗಿ ಹೇಳಿದರು.

ಪಾಸ್ ಪೋರ್ಟ್ ಗಾಗಿ ಜನರು ದೂರದ ನಗರಗಳಿಗೆ ಹೋಗುವ ಅವಶ್ಯಕತೆಯಿಲ್ಲದಂತೆ ಮಾಡುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿದ್ದೇವೆ, ವಿದೇಶಾಂಗ ಸಚಿವಾಲಯ ಮತ್ತು ಅಂಛೆ ಇಲಾಖೆ ಸೇರಿ ಈ ಸೇವೆಗಳನ್ನು ನೀಡಲಿವೆ ಎಂದು ಸಿಂಗ್ ಹೇಳಿದರು. ಮಧ್ಯವರ್ತಿಗಳ ಹಾವಳಿಯಿಲ್ಲ, ಪಾರದರ್ಶಕವಾಗಿ ಪಾಸ್ ಪೋರ್ಟ್ ಸೇವೆಗಳನ್ನು ಪಡೆಯಬಹುದು ಎಂದು ಅವರು ಭರವಸೆ ನೀಡಿದರು. ಈಗಾಗಲೇ ಹಲವು ಪ್ರಧಾನ ಅಂಛೆ ಕಛೇರಿಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.

Loading...