ಜಪಾನ್ ಪ್ರಧಾನಿ ಭೇಟಿ ಬೆನ್ನಲ್ಲೇ, ಭಾರತದಲ್ಲಿ ಹೈಸ್ಪೀಡ್ ರೈಲು ಯೋಜನೆಗೆ ಆಸಕ್ತಿ ವ್ಯಕ್ತಪಡಿಸಿದ ಚೀನಾ – News Mirchi
We are updating the website...

ಜಪಾನ್ ಪ್ರಧಾನಿ ಭೇಟಿ ಬೆನ್ನಲ್ಲೇ, ಭಾರತದಲ್ಲಿ ಹೈಸ್ಪೀಡ್ ರೈಲು ಯೋಜನೆಗೆ ಆಸಕ್ತಿ ವ್ಯಕ್ತಪಡಿಸಿದ ಚೀನಾ

ಭಾರತದಲ್ಲಿ ಹೈಸ್ಪೀಡ್ ರೈಲು ಯೋಜನೆಗಳನ್ನು ಕೈಗೊಳ್ಳಲು ಚೀನಾ ಆಸಕ್ತಿ ವ್ಯಕ್ತಪಡಿಸಿದೆ. ಭಾರತದಲ್ಲಿ ಹೈಸ್ಪೀಡ್ ರೈಲು ನಿರ್ಮಾಣಕ್ಕೆ ಮುಂದಾಗುತ್ತೇವೆ ಎಂದ ಸೂಚನೆಗಳನ್ನು ಅದು ಕಳುಹಿಸಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಬುಲೆಟ್ ರೈಲ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿರುವ ಹಿನ್ನೆಲೆಯಲ್ಲಿ ಚೀನಾದ ಈ ಪ್ರಕಟಣೆ ಆಶ್ಚರ್ಯ ಮೂಡಿಸಿದೆ.

ನಮ್ಮ ದೇಶದಲ್ಲಿ ಹೈಸ್ಪೀಡ್ ರೈಲು ತಂತ್ರಜ್ಞಾನ ಅದ್ಭುತವಾಗಿದೆ. ದೆಹಲಿಯಿಂದ ಅವಕಾಶ ಸಿಕ್ಕರೆ ಜೊತೆಗೂಡಿ ಕೆಲಸ ಮಾಡಲು ನಾವು ಸಿದ್ಧವಿದ್ದೇವೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಅಧಿಕೃತ ವಕ್ತಾರ ಗೆಂಗ್ ಶುವಾಂಗ್ ಹೇಳಿದ್ದಾರೆ. ಮುಂಬೈ- ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಪ್ರಯತ್ನಿಸಿದರೂ ಪ್ರಯೋಜನವಿಲ್ಲದಾಯಿತು ಎಂದು ಅವರು ಹೇಳಿದ್ದಾರೆ. ಇದೀಗ ನವದೆಹಲಿ – ಚೀನಾ ಹೈಸ್ಪೀಡ್ ರೈಲು ಯೋಜನೆಗಾಗಿ ಪ್ರಸ್ತಾವನೆಗಳನ್ನು ಸಿದ್ಧಗೊಳಿಸುತ್ತಿದ್ದೇವೆ, ಅವಕಾಶ ಸಿಕ್ಕರೆ ಭಾರತದೊಂದಿಗೆ ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಚೀನಾ ಪ್ರಸ್ತಾವನೆಯ ನಡುವೆಯೂ 508 ಕಿ.ಮೀ ದೂರದ ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆಯನ್ನು ಜಪಾನ್ ತನ್ನದಾಗಿಸಿಕೊಂಡಿತು.

Get Latest updates on WhatsApp. Send ‘Add Me’ to 8550851559

Contact for any Electrical Works across Bengaluru

Loading...
error: Content is protected !!