ನಾವು ಹಸಿವು ಮುಕ್ತ ರಾಜ್ಯ ಅಂದ್ರೆ, ಬಿಜೆಪಿಯು ಕಾಂಗ್ರೆಸ್ ಮುಕ್ತ ರಾಜ್ಯ ಎನ್ನುತ್ತಿದೆ : ಸಿದ್ದರಾಮಯ್ಯ – News Mirchi

ನಾವು ಹಸಿವು ಮುಕ್ತ ರಾಜ್ಯ ಅಂದ್ರೆ, ಬಿಜೆಪಿಯು ಕಾಂಗ್ರೆಸ್ ಮುಕ್ತ ರಾಜ್ಯ ಎನ್ನುತ್ತಿದೆ : ಸಿದ್ದರಾಮಯ್ಯ

ನಾವು ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು, ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕು ಅಂತ ಹೇಳ್ತಿದೀವಿ. ಆದರೆ ಬಿಜೆಪಿಯವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡ್ತೀವಿ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮಾತ್ರವಲ್ಲ ಯಾರೇ ಬಂದರೂ ರಾಜ್ಯವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಮತ್ತು ಆರ್.ಎಸ್.ಎಸ್ ನೇತಾರರು ಯಾರೂ ಸ್ವಾತಂತ್ರ್ಯ ತಂದುಕೊಟ್ಟಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ. ದೇಶಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದೂ ಕೂಡಾ ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. 60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ದೇಶಕ್ಕೆ ಏನೂ ಮಾಡೇ ಇಲ್ಲವೆಂಬ ಸುಳ್ಳು ಹೇಳುತ್ತಾ ಜನರನ್ನು ಮರುಳು ಮಾಡುವಂತ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

[ನಿಮ್ಮನ್ನು ಕೆಳಗಿಳಿಸಲೆಂದೇ ಅಮಿತ್ ಶಾ ಬಂದಿರುವುದು: ಜನಾರ್ಧನ ಪೂಜಾರಿ]

ಇಂದು ದೇಶದಲ್ಲಿ ಇರುವ ನೀರಾವರಿ ಯೋಜನೆಗಳು, ಕಾರ್ಖಾನೆಗಳು, ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಸಾಧನೆಗೆ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸವಲತ್ತು ಸಿಗಲು ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರವೇ ಕಾರಣ. ಹೈದರಾಬಾದ್ ಕರ್ನಾಟಕಕ್ಕೆ ಬಿಜೆಪಿ ಕೊಡುಗೆಯೇನು ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಇದೇ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಸೂಚಿಸಿದ್ದೆ, ಅವರು ಕೇವಲ ಎರಡೇ ದಿನಗಳಲ್ಲಿ ಸಾಲ ಮನ್ನಾ ಮಾಡಿದರು. ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಲ್ಲಿ ಸಾಧ್ಯವಾಗಿದ್ದು ಬಿಜೆಪಿ ಏಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದರು.

Loading...