ರಾಹುಲ್ ಗಾಂಧಿ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು ದಾಖಲು |News Mirchi

ರಾಹುಲ್ ಗಾಂಧಿ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು ದಾಖಲು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಂತರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗೌರಿ ಲಂಕೇಶ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್.ಎಸ್.ಎಸ್ ಸಿದ್ಧಾಂತಗಳಿಗೆ ವಿರುದ್ಧವಾಗಿ ಯಾರಾದರೂ ಮಾತನಾಡಿದರೆ ಅವರನ್ನು ಹೆದರಿಸುವುದು, ದಾಳಿ ಮಾಡುವುದು, ಹತ್ಯೆ ಮಾಡುವುದು ಸಾಮಾನ್ಯವಾಗಿದೆ ಎಂದು ಹೇಳಿದ್ದರು.

ಈ ಘಟನೆ ಕುರಿತು ಪ್ರಧಾನಿ ಮೋದಿ ಮೌನವಹಿಸಿರುವುದು ನೋಡುತ್ತಿದ್ದರೆ ವಿರೋಧಿಗಳನ್ನು ಬಗ್ಗು ಬಡಿಯುವುದೇ ಅವರ ಸಿದ್ಧಾಂತದಂತೆ ಸ್ಪಷ್ಟವಾಗುತ್ತಿದೆ ಎಂದು ರಾಹುಲ್ ಹೇಳಿದ್ದರು. ಪ್ರಧಾನಿ ಮತ್ತು ಪಕ್ಷದ ನಾಯಕರ ವಿರುದ್ಧ ರಾಹುಲ್ ನೀಡಿದ್ದ ಹೇಳಿಕೆಗಳಿಗೆ ಕರ್ನಾಟಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

Loading...
loading...
error: Content is protected !!