ಬೆಂಗಳೂರಲ್ಲಿ 44 ಗುಜರಾತ್ ಕಾಂಗ್ರೆಸ್ ಶಾಸಕರು! – News Mirchi

ಬೆಂಗಳೂರಲ್ಲಿ 44 ಗುಜರಾತ್ ಕಾಂಗ್ರೆಸ್ ಶಾಸಕರು!

ರಾಜ್ಯಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಗುಜರಾತ್ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹಾರುತ್ತಿರುವುದು ಕಾಂಗ್ರೆಸ್ ನಾಯಕರಿಗೆ ಚಿಂತೆಗೀಡು ಮಾಡಿದೆ. ಈಗಾಗಲೇ 6 ಕಾಂಗ್ರೆಸ್ ಶಾಸಕರು ಆ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಮತ್ತಷ್ಟು ಶಾಸಕರು ಬಿಜೆಪಿಗೆ ಹಾರುವ ಸಾಧ್ಯತೆಯನ್ನು ಮನಗಂಡಿರುವ ಕಾಂಗ್ರೆಸ್ ನಾಯಕರು, ಗುಜರಾತಿನ 44 ಶಾಸಕರನ್ನು ಉಳಿಸಿಕೊಳ್ಳಲು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ. ಎಲ್ಲಾ ಗುಜರಾತ್ ಕಾಂಗ್ರೆಸ್ ಶಾಸಕರು ಬಿಡದಿ ಬಳಿಯ ಈಗಲ್ ಟನ್ ಗಾಲ್ಫ್ ರೆಸರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಬಿಜೆಪಿ ಪ್ರಯತ್ನವನ್ನು ವಿಫಲಗೊಳಿಸಲು 44 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಹೊರಟಿದ್ದಾರೆ. ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಣದ ಆಮಿಷ ಮತ್ತು ಒತ್ತಡಗಳಿಂದ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವಂತೆ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಶೈಲೇಶ್ ಪಾರ್ಮರ್ ಹೇಳಿದ್ದಾರೆ. ಮತ್ತೊಬ್ಬ ಶಾಸಕ ಹೇಳುವಂತೆ ಶಾಸಕರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವ ಸಾಧ್ಯತೆಯಿದೆ.

ಚೀನಾವನ್ನು ಎದುರಿಸಲು ಆಕಾಶ್ ಕ್ಷಿಪಣಿಗಳನ್ನು ನಿಲ್ಲಿಸಲು ನಿರ್ಧರಿಸಲಾಗಿತ್ತು… ಆದರೆ ಆಗಿದ್ದೇನು?

ಇದಕ್ಕೂ ಮುನ್ನ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಗುಜರಾತ್ ಬಿಜೆಪಿ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕುದುರೆ ವ್ಯಾಪಾರಕ್ಕೆ ಇಳಿದಿದೆ ಎಂದು ಆರೋಪಿಸಿದರು.

ಶಾಸಕರನ್ನು ಖರೀದಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಬಿಜೆಪಿ ಸೇರಲು ನನಗೆ ರೂ.10 ಕೋಟಿ ನೀಡುವುದಾಗಿ ಆಮಿಷವೊಡ್ಡಿತ್ತು ಎಂದು ಶಾಸಕ ಪುನಾಭಾಯ್ ಗಾಮಿತ್ ಹೇಳಿದ್ದಾರೆ.

ಸುಷ್ಮಾಜೀ ನೀವು ನಮ್ ದೇಶದ ಪ್ರಧಾನಿಯಾಗಬೇಕಿತ್ತು ಎಂದ ಪಾಕ್ ಮಹಿಳೆ

ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ನಕ್ಕು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗಾಗಿದೆ. ಅವರ ಶಾಸಕರನ್ನೇ ಅವರು ಹಿಡಿದಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Loading...