ಮರಳು ಮಾಫಿಯಾದಲ್ಲಿ ಕೈ ಮುಖಂಡರು: ಯಡಿಯೂರಪ್ಪ ಆರೋಪ

ಮಂಗಳೂರು: ಮರಳು ಮಾಫಿಯಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ.

ಈ ಮರಳು ಮಾಫಿಯಾದಿಂದಾಗಿಯೇ ಜಿಲ್ಲೆಯಲ್ಲಿ ಮರಳು ಅಭಾವ ಸೃಷ್ಟಿಯಾಗಿದೆ. ಮರಳಿನ ಕೊರತೆಯಿಂದ ಇಂದು ಇಲ್ಲಿನ ಬಡವರು ಮನೆ ನಿರ್ಮಾಣ ಮಾಡಲಾಗದ ಪರಿಸ್ಥಿತಿ ಎದುರಾಗಿದೆ ಎಂದು ಅವರು ಹೇಳಿದ್ದಾರೆ.

ಡ್ರಗ್ಸ್ ಹಾವಳಿಯನ್ನು ಸರ್ಕಾರ ತಡೆಯಬೇಕಿತ್ತು, ಆದರೆ ಡ್ರಗ್ಸ್ ಮಾಫಿಯಾನೇ ರಾಜ್ಯ ಸರ್ಕಾರವನ್ನು ನಿಯಂತ್ರಿಸುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದರು. ಕೇರಳದಲ್ಲಾದಂತೆ ಕೊಲೆ, ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಇಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ನಂತಹ ಉಗ್ರ ಸಂಘಟನೆಗಳಿಗೆ ಯುವಕರನ್ನು ನೇಮಕ ಮಾಡುವಂತಹ ಎಜೆಂಟರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಗಳೂರಿನಲ್ಲಿ ಎನ್.ಐ.ಎ(ರಾಷ್ಟ್ರೀಯ ತನಿಖಾ ಸಂಸ್ಥೆ) ವನ್ನು ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದರು.