ಉ.ಪ್ರ ಚುನಾವಣೆ: ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಯಲ್ಲಿ ಎಲ್ಲಾ ಸ್ಥಾನಗಳಿಗೂ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ. ರಾಜ್ಯದ ಒಟ್ಟು 403 ವಿಧಾನಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ.

ಆಡಳಿತ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಯತ್ನಗಳು ಒಂದು ಕಡೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ರಾಜ್ ಬಬ್ಬರ್ ಹೇಳಿಕೆ ಮಹತ್ವ ಪಡೆದಿದೆ. ಈಗಾಗಲೇ ಹಲವು ಅಭ್ಯರ್ಥಿಗಳನ್ನು ಪರಿಶೀಲಿಸಿದ್ದು, ಅವರ ಹೆಸರುಗಳನ್ನು ಸೋಮವಾರ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸುವುದಾಗಿ ಹೇಳಿದರು.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಗೆ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಗುಲಾಂ ನಬೀ ಆಜಾದ್ ಆಸಕ್ತರಾಗಿದ್ದಾರೆ, ಆದರೆ ಪಿಸಿಸಿ ಅಧ್ಯಕ್ಷ ರಾಜ್ ಬಬ್ಬರ್ ಮಾತ್ರ ಈ ವಿಷಯದಲ್ಲಿ ಭಿನ್ನ ನಿಲುವು ತಳೆದಿದ್ದಾರೆ ಎನ್ನಲಾಗುತ್ತಿದೆ.

The Congress said that it is preparing to field candidates for all 403 constituencies in the Uttar Pradesh polls.

Related News

Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache