ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ವರದಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅನುಮತಿ |News Mirchi

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ವರದಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅನುಮತಿ

ಮಡಿಕೇರಿ: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ವರದಿಗೆ ಆಕ್ಷೇಪಣೆ ಸಲ್ಲಿಸಲು ಗಣಪತಿ ಕುಟುಂಬದ ಸದಸ್ಯರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಅನುಮತಿ ನೀಡಿದೆ.

ಈ ಪ್ರಕರಣದಲ್ಲಿ ತಮ್ಮನ್ನು ಸಹ ದೂರುದಾರರನ್ನಾಗಿ ಪರಿಗಣಿಸುವಂತೆ ಗಣಪತಿ ತಂದೆ ಕುಶಾಲಪ್ಪ, ತಾಯಿ ಜಾಜಿ ಪೂವಮ್ಮ, ಸಹೋದರ ಎಂ.ಕೆ.ಮಾಚಯ್ಯ ಮತ್ತು ಸಹೋದರಿ ಸಬಿತಾ ಅವರು ಅಕ್ಟೋಬರ್ 24 ರಂದು ಮನವಿ ಮಾಡಿದ್ದರು.

ಕಳೆದ ಜುಲೈ 7 ರಂದು ಡಿವೈಎಸ್‌ಪಿ ಗಣಪತಿ ಲಾಡ್ಜೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಖಾಸಗಿ ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ, ತಮಗೆ ಸಚಿವ ಕೆ.ಜೆ.ಜಾರ್ಜ್‌, ಹಿರಿಯ ಪೊಲೀಸ್ ಅಧಿಕಾರಿ ಎ.ಎಂ.ಪ್ರಸಾದ್, ಡಿಐಜಿ ಪ್ರಣಬ್ ಮೊಹಾಂತಿ ಅವರು ಕಿರುಕುಳ ನೀಡಿದ್ದಾರೆ, ತನಗೆ ಏನಾದರೂ ಆದರೆ ಅವರೇ ಹೊಣೆ ಎಂದು ಆರೋಪಿಸಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ಹಾಕಿತ್ತು.

ತನಿಖೆ ನಡೆಸಿದ ಸಿಐಡಿ, ಸಚಿವರು ಮತ್ತು ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿ ಸೆಪ್ಟೆಂಬರ್ 17 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಸಿಐಡಿ ವರದಿಗೆ ಗಣಪತಿ ಪುತ್ರ ನೇಹಾಲ್ ತೃಪ್ತಿ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗಣಪತಿ ಕುಟುಂಬದ ಇತರ ಸದಸ್ಯರು ಪ್ರಕರಣದಲ್ಲಿ ತಮ್ಮನ್ನೂ ದೂರುದಾರರನ್ನಾಗಿ ಪರಿಗಣಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

Loading...
loading...
error: Content is protected !!