ಡಿಕೆಶಿಗೆ ಪೋನ್ ಕದ್ದಾಲಿಕೆಯ ಶಂಕೆ

ತಮ್ಮ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ಶಂಕೆಯಿದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರೆ ಮಧ್ಯೆ ಆಗಾಗ ಕರೆ ಕಡಿತಗೊಳ್ಳುತ್ತದೆ. ನನ್ನ ಫೋನ್ ಕರೆ ಕದ್ದಾಲಿಸಲಾಗುತ್ತಿದೆ ಎಂಬ ಅನುಮಾನವಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಮನೆಗಳ ಮೇಲೆ ನಡೆಯುತ್ತಿರುವ ಐಟಿ ದಾಳಿಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೆರಿಗೆ ಇಲಾಖೆ ಅಧಿಕಾರಿಗಳಿಗೆ ದಾಳಿ ನಡೆಸಲು ಅಧಿಕಾರವಿದೆ, ಆದರೆ ಇದರಲ್ಲಿ ರಾಜಕೀಯ ಬೆರೆಸಬಾರದು, ಕಾಂಗ್ರೆಸ್ ಸರ್ಕಾರದಲ್ಲಿ ಸಿಬಿಐ, ಜಾರಿ ನಿರ್ದೇಶನಾಲಯ ಮುಂತಾದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದರು.

Loading...

Leave a Reply

Your email address will not be published.

error: Content is protected !!