ಪ್ರತ್ಯೇಕ ಗೂರ್ಖಾಲ್ಯಾಂಡ್ ಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸ್ ಹತ್ಯೆ – News Mirchi

ಪ್ರತ್ಯೇಕ ಗೂರ್ಖಾಲ್ಯಾಂಡ್ ಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸ್ ಹತ್ಯೆ

ಡಾರ್ಜಿಲಿಂಗ್ (ಪಶ್ಚಿಮ ಬಂಗಾಳ): ಪ್ರತ್ಯೇಕ ಗೂರ್ಖಾಲ್ಯಾಂಡ್ ರಾಜ್ಯಕ್ಕೆ ಒತ್ತಾಯಿಸಿ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ನಡೆಸುತ್ತಿರುವ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಜೀವ ಕಳೆದುಕೊಂಡಿದ್ದಾರೆ. ಇಂಡಿಯನ್ ರಿಸರ್ವ್ ಬೆಟಾಲಿಯನ್ ನ ಅಸಿಸ್ಟೆಂಟ್ ಕಮಾಂಡರ್ ರವರನ್ನು ಪ್ರತಿಭಟನಾಕಾರರು ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸುತ್ತಿದ್ದಾರೆ. ಮತ್ತೊಂದು ಕಡೆ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಜಿಜೆಎಂ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂದು ಆ ಪಕ್ಷ ಆರೋಪಿಸುತ್ತಿದೆ.

ಕಳೆದ ಕೆಲ ದಿನಗಳಿಂದ ಪ್ರತ್ಯೇಕ ರಾಜ್ಯಕ್ಕಾಗಿ ನಡೆಸುತ್ತಿರುವ ಪ್ರತಿಭಟನೆಗಳಿಂದ ಡಾರ್ಜಿಲಿಂಗ್ ನಲ್ಲಿ ಉದ್ವಿಘ್ನ ಪರಿಸ್ಥಿತಿ ನೆಲೆಸಿದ್ದು, ಶುಕ್ರವಾರ ರಾತ್ರಿಯಿಂದ ಘರ್ಷಣೆ ಮತ್ತಷ್ಟು ಗಂಭೀರವಾಗಿದೆ. ಶನಿವಾರ ಪ್ರತಿಭಟನಾಕಾರರು ರಸ್ತೆಗಿಳಿದು ಪೊಲೀಸರ ಮೇಲೆ ಕಲ್ಲು, ಬಾಟಲ್ ಎಸೆದರು. ಹೀಗಾಗಿ ಅವರನ್ನು ನಿಯಂತ್ರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಲಾಠಿ ಚಾರ್ಜ್ ಮಾಡಿದರು.

Loading...