ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಂಧನ – News Mirchi

ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಂಧನ

ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಲ್ಡರ್ ಗಳಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಥಾಣೆ ಕ್ರೈಂ ಬ್ರ್ಯಾಂಚ್ ಪೊಲೀಸರು ಸೋಮವಾರ ರಾತ್ರಿ ಆತನನ್ನು ಬಂಧಿಸಿದ್ದಾರೆ.

ಎನ್ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ನೇತೃತ್ವದಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. “ಸುಲಿಗೆ ಪ್ರಕರಣದಲ್ಲಿ ಆತನ ಮೇಲೆ ಆರೋಪ ಬಂದಿದ್ದರಿಂದ ನಾವು ಆತನ ನ ವಿಚಾರಣೆ ನಡೆಸಿದ್ದೆವು, ವಿಚಾರಣೆ ನಂತರ ಈ ಪ್ರಕರಣದಲ್ಲಿ ಆತನ ಕೈವಾಡವಿದೆ ಎಂದು ತಿಳಿದು ಬಂಧಿಸಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇತ್ತೀಚೆಗೆ ಥಾಣೆಯ ಉದ್ಯಮಿಯೊಬ್ಬರಿಗೆ ಇಕ್ಬಾಲ್ ಹೆಸರಿನಲ್ಲಿ ಫೋನ್ ಕರೆ ಮಾಡಿ ಬೆದರಿಕೆ ಹಾಕಲಾಗುತ್ತಿತ್ತು. ಹೀಗಾಗಿ ಆ ಉದ್ಯಮಿ ಥಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ಇಕ್ಬಾಲ್ ತನ್ನ ಸಹೋದರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನ ಮುಂಬೈ ನ ರಿಯಲ್ ಎಸ್ಟೇಟ್ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾನೆ ಎಂದು ಭಾವಿಸಲಾಗುತ್ತಿದೆ. ಇತ್ತೀಚೆಗೆ ಮುಂಬೈನ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ ಎರಡು ಕಟ್ಟಡಗಳನ್ನು ತೆರವುಗೊಳಿಸಲು ಇಕ್ಬಾಲ್ ಗೆ ಅಧಿಕಾರಿಗಳು ನೋಟೀಸ್ ನೀಡಿದ್ದರು.

2003 ರಲ್ಲಿ ಯುಎಇಯಿಂದ ಭಾರತಕ್ಕೆ ಗಡೀಪಾರಾದ ಇಕ್ಬಾಲ್, 2007 ರಲ್ಲಿ ಭಾರತದಲ್ಲಿ ತನ್ನ ವಿರುದ್ಧದ ಪ್ರಕರಣದಲ್ಲಿ ಮುಕ್ತನಾಗಿದ್ದ. ಇದೀಗ ಎನ್ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮ ಇಕ್ಬಾಲ್ ನನ್ನು ಬಂಧಿಸಿದ್ದಾರೆ. ಈ ಹಿಂದೆ ಲಕ್ಕಾನ್ ಭಯ್ಯಾನನ್ನು ಎನ್ಕೌಂಟರ್ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಸಸ್ಪೆಂಡ್ ಆಗಿದ್ದರು. ಇತ್ತೀಚೆಗಷ್ಟೇ ಮತ್ತೆ ಸೇವೆಗೆ ಸೇರಿದ್ದು, ಅದರ ಬೆನ್ನಲ್ಲೇ ಇಕ್ಬಾಲ್ ನನ್ನು ಬಂಧಿಸಿದ್ದು ಮಹತ್ವ ಪಡೆದಿದೆ.

Get Latest updates on WhatsApp. Send ‘Add Me’ to 8550851559

Loading...