ನ್ಯಾಯಾಂಗ ಬಿಕ್ಕಟ್ಟು: ನ್ಯಾ.ಲೋಯಾ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ |News Mirchi

ನ್ಯಾಯಾಂಗ ಬಿಕ್ಕಟ್ಟು: ನ್ಯಾ.ಲೋಯಾ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೇಲೆ ಆರೋಪವಿರುವ ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ನ ನಾಲ್ವರು ಹಿರಿಯ ನ್ಯಾಯಾಧೀಶರು ಸುಪ್ರೀಂ ಕೋರ್ಟಿನಲ್ಲಿ ಪ್ರಕರಣಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪಿಸುತ್ತಾ ಸುದ್ದಿಗೋಷ್ಠಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಲೋಯಾ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟಿನಿಂದ ಸ್ವತಂತ್ರ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ನ್ಯಾಯಾಲಯವು ನಾಲ್ವರು ಹಿರಿಯ ನ್ಯಾಯಾಧೀಶರು ವಿವಾದಿತ ಅಂಶಗಳನ್ನು ಪರಗಣಿಸಿ ನ್ಯಾಯಾಂಗದ ಸಂಪ್ರದಾಯಗಳಿಗೆ ಅನುಗುಣವಾಗಿ ಸ್ಥಿರವಾದ ಪರಿಹಾರ ಕಂಡುಕೊಳ್ಳಬೇಕು. ಈ ಮೂಲಕ ನ್ಯಾಯಾಂಗದ ಸ್ವಾತಂತ್ರ್ಯವನ್ನು ಸಂರಕ್ಷಿಸಬೇಕು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಆರೋಪ ಮಾಡಿರುವುದು ಭಾರತದ ಪ್ರಜಾಪ್ರಭುತ್ವದ ಮೇಲೆ ದೂರಗಾಮಿ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!