Warning: preg_match(): Compilation failed: range out of order in character class at offset 33 in /home1/newsmg7m/public_html/wp-content/plugins/json-api/singletons/api.php on line 294
ದೇವನಹಳ್ಳಿ ರಸ್ತೆಗೆ ಟಿಪ್ಪು ಹೆಸರಿಡಿ: ವಾಟಾಳ್ ನಾಗರಾಜ್ – News Mirchi

ದೇವನಹಳ್ಳಿ ರಸ್ತೆಗೆ ಟಿಪ್ಪು ಹೆಸರಿಡಿ: ವಾಟಾಳ್ ನಾಗರಾಜ್

ದೇವನಹಳ್ಳಿ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಟಿಪ್ಪು ಜಯಂತಿ ಪ್ರಯುಕ್ತ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಟಿಪ್ಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಟಿಪ್ಪು ಒಬ್ಬ ಅಪ್ರತಿಮ ಹೋರಾಟಗಾರ, ಟಿಪ್ಪು ಹೆಸರನ್ನು ದೇವನಹಳ್ಳಿ ರಸ್ತೆಗೆ ನಾಮಕರಣ ಮಾಡಬೇಕು ಎಂದು ಹೇಳಿದರು.

ಇನ್ನು ಟಿಪ್ಪು ಜಯಂತಿ ವಿರೋಧಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ನಾಯಕರ ಕೊಲೆಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!