ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಇನ್ನಿಲ್ಲ – News Mirchi

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್ (81) ಗುರುವಾರ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲಿಸಲಾಗಿತ್ತು.

ಡಿಸೆಂಬರ್ 25, 1935 ರಂದು ಕಲ್ಬುರ್ಗಿ ಜಿಲ್ಲೆಯ ಜೀವರ್ಗ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ಜನಿಸಿದ್ದ ಎನ್, ಧರಂ ಸಿಂಗ್ ಅವರು ವಿಧಾನಸಭೆಗೆ 7 ಬಾರಿ ಆರಿಸಿ ಬಂದಿದ್ದರು, 2009 ರಲ್ಲಿ ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ದೇವರಾಜ್ ಅರಸ್, ಗುಂಡೂರಾವ್, ಬಂಗಾರಪ್ಪ, ವೀರಪ್ಪ ಮೊಯಿಲಿ ಮತ್ತು ಎಸ್.ಎಂ ಕೃಷ್ಣ ಅವರ ಸಂಪುಟಗಳಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

Click for More Interesting News

Loading...
error: Content is protected !!