ವಲಸಿಗರಿಗೆ ಟಿಕೆಟ್ ಭರವಸೆ ಬೇಡ: ಅಮಿತ್ ಶಾ ಸೂಚನೆ

ಇತರೆ ಪಕ್ಷಗಳಿಂದ ವಲಸೆ ಬರುವ ರಾಜಕಾರಣಿಗಳಿಗೆ ಇನ್ನು ರಾಜ್ಯ ಬಿಜೆಪಿ ಮುಖಂಡರು ಟಿಕೆಟ್ ನೀಡುವ ಭರವಸೆಯನ್ನು ನೀಡುವಂತಿಲ್ಲ. ಹೀಗಂತ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಸೂಚಿಸಿದೆ. ಇತರೆ ಪಕ್ಷಗಳವರನ್ನು ಸೆಳೆಯಲು ಆಪರೇಷನ್ ಕಮಲ ಪ್ರಯತ್ನಗಳಿಗೆ ಕೈಹಾಕಬೇಡಿ ಎಂದು ಹೈಕಮಾಂಡ್ ಸೂಚಿಸಿದೆ.

ನಮ್ಮಲ್ಲೇ ಸಾಕಷ್ಟು ಅಭ್ಯರ್ಥಿಗಳಿದ್ದಾರೆ, ಅಂತದ್ದರಲ್ಲಿ ಪಕ್ಷಕ್ಕೆ ಬಂದವರಿಗೆಲ್ಲಾ ಟಿಕೆಟ್ ನೀಡಿದರೆ ಕಾರ್ಯಕರ್ತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ಬಂಡಾಯದ ಬಿಸಿ ತಟ್ಟುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರಿಗೆ ಎಚ್ಚರಿಸಿದ್ದಾರೆ ಎನ್ನಲಾಗಿದೆ.

ಸ್ವಯಂ ಪ್ರೇರಿತರಾಗಿ ಪಕ್ಷಕ್ಕೆ ಬರುವವರನ್ನು ಮಾತ್ರ ಸೇರಿಸಿಕೊಳ್ಳಿ. ಆದರೆ ಯಾವುದೇ ಕಾರಣಕ್ಕೂ ಟಿಕೆಟ್ ಭರಸೆ ನೀಡಬೇಡಿ ಎಂದು ಪಕ್ಷದ ಕೇಂದ್ರ ನಾಯಕರು ಸೂಚಿಸಿದ್ದಾರೆ. ಆಪರೇಷನ್ ಕಮಲಕ್ಕಿಂತ ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಗೆಲುವು ಸುಲಭವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

Get Latest updates on WhatsApp. Send ‘Subscribe’ to 8550851559