ಬರ ಪರಿಹಾರ ಕಾಮಗಾರಿಗೆ ಹಣ ಬಿಡುಗಡೆ: ಕಾಗೋಡು

ಬರ ಪರಿಹಾರ ಕಾಮಗಾರಿಗಳಿಗಾಗಿ ರೂ. 254 ಕೋಟಿ ಬಿಡುಗಡೆ ಮಾಡಲಾಗಿದ್ದು, ಸಮೀಕ್ಷೆಗೆ ಅನುಗುಣವಾಗಿ ಜಿಲ್ಲಾಡಳಿತಗಳು ಅನುದಾನ ಬಿಡುಗಡೆ ಮಾಡಲಿವೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಬಿ.ಬಣಕಾರ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದು ಬರಪರಿಹಾರ ಕಾಮಗಾರಿಗಳಿಗೆ ರೂ. 254 ಕೋಟಿ ಬಿಡುಗಡೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರೂ. 1903 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದ ಬರ ಪರಿಹಾರ ಕಾರ್ಯಗಳಿಗೆ ರೂ. 4702.54 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಈ ಸಂಬಂಧ ನವೆಂಬರ್ 2 ರಿಂದ ಕೇಂದ್ರ ಸರ್ಕಾರದ ತಂಡ ರಾಜ್ಯದ ಬರಪೀಡಿದ ಪ್ರದೇಶಗಳ ಅಧ್ಯಯನ ಮಾಡಿದೆ ಎಂದು ಕಾಗೋಡು ತಿಳಿಸಿದರು.