ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ |News Mirchi

ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹುರಿಯತ್ ನಾಯಕ ಸೈಯದ್ ಅಲಿ ಶಾ ಗಿಲಾನಿಗೆ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 18 ರಂದು ಜಾರಿ ನಿರ್ದೇಶನಾಲಯದ ಪ್ರಧಾನ ಕಛೇರಿಯಲ್ಲಿ ಹಾಜರಾಗಲು ಗಿಲಾನಿಗೆ ಸೂಚಿಸಲಾಗಿದೆ.

2002 ರಲ್ಲಿ ಗಿಲಾನಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಆತನ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆಯಾಗಿತ್ತು. ಸುಮಾರು 10,000 ಡಾಲರ್(ಅಂದಾಜು 6.5 ಲಕ್ಷ ರೂಪಾಯಿ) ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಅದರ ಮೂಲವನ್ನು ವಿವರಿಸಲು ಗಿಲಾನಿ ವಿಫಲರಾಗಿದ್ದರು. ನಂತರ ಆತನ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಅಮರನಾಥ ದೇಗುಲದಲ್ಲಿ ಮಂತ್ರಘೋಷ, ಜೈಕಾರಗಳಿಗೆ ನಿಷೇಧ

2003 ರಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದಾಯ ತೆರಿಗೆ ಇಲಾಖೆಯು ಗಿಲಾನಿಗೆ ಸಮನ್ಸ್ ಜಾರಿ ಮಾಡಿದ್ದರೂ ಗಿಲಾನಿ ಹಾಜರಾಗಿರಲಿಲ್ಲ. ಈ ಪ್ರಕರಣ ಆದಾಯ ತೆರಿಗೆ ಇಲಾಖೆ ಮತ್ತು ಜಾರಿನಿರ್ದೇಶನಾಲಯದಲ್ಲಿ ಅಂದಿನಿಂದ ಬಾಕಿ ಉಳಿದಿದೆ.

Get Latest updates on WhatsApp. Send ‘Subscribe’ to 8550851559

Loading...
loading...
error: Content is protected !!