ಮಣಿಪಾಲ್ ಆಸ್ಪತ್ರೆಯಲ್ಲಿ ಬೆಂಕಿ, 40 ರೋಗಿಗಳ ಸ್ಥಳಾಂತರ – News Mirchi

ಮಣಿಪಾಲ್ ಆಸ್ಪತ್ರೆಯಲ್ಲಿ ಬೆಂಕಿ, 40 ರೋಗಿಗಳ ಸ್ಥಳಾಂತರ

ಮಾಲತಿ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 9:45 ಕ್ಕೆ ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಶಾಮಕ ಸಿಬ್ಬಂದಿ ಆಸ್ಪತ್ರೆಗೆ ಧಾವಿಸಿ ರೋಗಿಗಳನ್ನು ಏರ್ಪೋರ್ಟ್ ರಸ್ತೆಯಲ್ಲಿರುವ ಮತ್ತೊಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ನಾಲ್ಕು ಅಗ್ನಿಶಾಮಕ ತಂಡಗಳಿಂದ ಬೆಂಕಿಯನ್ನು ನಂದಿಸಲಾಯಿತು. ಘಟನೆಯಿಂದ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ.

Contact for any Electrical Works across Bengaluru

Loading...
error: Content is protected !!