ಇಂದು ಸಮಾಜವಾದಿ ಪಕ್ಷದ ಮುಖಂಡ ಗೌರವ್ ಭಾಟಿಯಾ ಬಿಜೆಪಿಗೆ |News Mirchi

ಇಂದು ಸಮಾಜವಾದಿ ಪಕ್ಷದ ಮುಖಂಡ ಗೌರವ್ ಭಾಟಿಯಾ ಬಿಜೆಪಿಗೆ

(Updated: 5:50 pm) ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಮತ್ತು ಪ್ರಧಾನಿಯನ್ನು ಬಹಿರಂಗವಾಗಿ ಹೊಗಳುತ್ತಿರುವ ಪ್ರತಿಪಕ್ಷ ನಾಯಕರ ಸಂಖ್ಯೆ ಹೆಚ್ಚಾಗಿದೆ. ಇದೀಗ ಆ ಪಟ್ಟಿಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಗೌರವ್ ಭಾಟಿಯಾ ಕಾಣಿಸಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಗೌರವ್, ಇಂದು (ಭಾನುವಾರ) ಸಂಜೆ ನವದೆಹಲಿಯ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗೌರವ್ ಭಾಟಿಯಾ ಸಮಾಜವಾದಿ ಪಕ್ಷದ ಕಾನೂನು ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಆದರೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಇತ್ತೀಚೆಗಷ್ಟೇ ಕರ್ನಾಟಕದ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಬಿಜೆಪಿ ಸೇರ್ಪಡೆಯಾಗಿದ್ದರು. ಅದರ ಬೆನ್ನಲ್ಲೇ ರಾಷ್ಟ್ರಪತಿ ಹುದ್ದೆಗೆ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೆಸರನ್ನು ಪರಿಗಣಿಸುವಂತೆ ಮತ್ತೋರ್ವ ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಪ್ರಧಾನಿಯವರೆಗೆ ಪತ್ರ ಬರೆದಿದ್ದಾರೆ. ದೆಹಲಿಯ ಆಪ್ ಶಾಸಕ ವೇದ ಪ್ರಕಾಶ್ ಇತ್ತೀಚೆಗೆ ಬಿಜೆಪಿ ಕಡೆ ವಾಲಿದ್ದಾರೆ.

Loading...
loading...
error: Content is protected !!