ಸಂಸತ್ತಿನಲ್ಲಿ ಕುಸಿದು ಬಿದ್ದಿದ್ದ ಸಂಸದನ ಸಾವು

ಮಂಗಳವಾರ ಸಂಸತ್ತಿನಲ್ಲಿ ಹೃದಯಘಾತದಿಂದ ಕುಸಿದುಬಿದ್ದಿದ್ದ ಮಾಜಿ ಕೇಂದ್ರ ಸಚಿವ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ನಾಯಕ ಇ ಅಹ್ಮದ್, ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಇ.ಅಹಮದ್ ಅವರು ಕುಸಿದು ಬಿದ್ದಿದ್ದರು. ಕಾಂಗ್ರೆಸ್ ನೇತೃತ್ವದ ಯುಪಿಎ-1, ಯುಪಿಎ-2 ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು. ಇವರು ಕೇರಳದ ಮಲಪ್ಪುರಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಸಾಮಾನ್ಯವಾಗಿ ಹಾಲಿ ಸಂಸದರು ಸಾವನ್ನಪ್ಪಿದರೆ ಲೋಕಸಭೆಯನ್ನು ಒಂದು ದಿನ ಮುಂದೂಡಲಾಗುತ್ತದೆ. ಕೇಂದ್ರ ಸರ್ಕಾರ ಇಂದು ಬಡ್ಜೆಟ್ ಮಂಡಿಸಲು ಸರ್ವ ಸನ್ನದ್ಧವಾಗಿದ್ದು, ಇ.ಅಹಮದ್ ಸಾವಿನ ಹಿನ್ನೆಲೆಯಲ್ಲಿ ಇಂದು ಸದನ ನಡೆಯುತ್ತಾ ಅಥವಾ ಮುಂದೂಡಲಾಗುತ್ತದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

English Summary: Former Union minister and Indian Union Muslim League (IUML) leader E Ahamed, who collapsed in Parliament on Tuesday due to a cardiac arrest, passed away early on Wednesday morning after being rushed to hospital and put on life support.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache