ಅಪರಿಚಿತ ದುಷ್ಕರ್ಮಿಗಳಿಂದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ – News Mirchi

ಅಪರಿಚಿತ ದುಷ್ಕರ್ಮಿಗಳಿಂದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ಬೆಂಗಳೂರು: ಪತ್ರಕರ್ತೆ, ಗೌರಿ ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾತ್ರಿ ಸುಮಾರು 7:30 ರಲ್ಲಿ ರಾಜರಾಜೇಶ್ವರಿ ನಗರದ ತಮ್ಮ ಮನೆಯ ಹೊರಗೆ ನಿಂತಿದ್ದ ಸಂದರ್ಭದಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಗೌರಿ ಲಂಕೇಶ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಎದೆ ಮತ್ತು ಹಣೆಯ ಭಾಗಕ್ಕೆ ಗುಂಡು ಹೊಕ್ಕಿವೆ ಎಂದು ಹೇಳಲಾಗುತ್ತಿದೆ.

ಗುಂಡು ಹಾರಿಸುತ್ತಿದ್ದಂತೆ ಗೌರಿ ಲಂಕೇಶ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ರಾಜರಾಜೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ, ತನಿಖೆಯಲ್ಲಿ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

Loading...