ಗೌರಿ ಲಂಕೇಶ್ ಹತ್ಯೆ ಪ್ರಕರಣ ಎಸ್ಐಟಿ ಗೆ : ಸಿದ್ದರಾಮಯ್ಯ – News Mirchi

ಗೌರಿ ಲಂಕೇಶ್ ಹತ್ಯೆ ಪ್ರಕರಣ ಎಸ್ಐಟಿ ಗೆ : ಸಿದ್ದರಾಮಯ್ಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಐಜಿ ನೇತೃತ್ವದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತೊಂದು ಕಡೆ ಘಟನೆ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.

ಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು. ಈಗಾಗಲೇ ಡಿಜಿಪಿ ಮತ್ತು ಐಜಿಪಿಗಳಿಗೆ ಎಸ್ಐಟಿ ರಚಿಸುವಂತೆ ಸೂಚಿಸಲಾಗಿದೆ, ಈ ತಂಡವು ಗೌರಿ ಲಂಕೇಶ್ ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸಲಿದೆ ಎಂದು ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗೌರಿ ಲಂಕೇಶ್ ಹತ್ಯೆಯನ್ನು ಚಿಂತಕರಾದ ಎಂ.ಎಂ.ಕಲ್ಬುರ್ಗಿ, ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ಅವರ ಹತ್ಯೆಗಳೊಂದಿಗೆ ಹೋಲಿಕೆ ಮಾಡಲು ನಿರಾಕರಿಸಿದರು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಎಲ್ಲಾ ಚಿಂತಕರಿಗೂ ರಕ್ಷಣೆ ಒದಗಿಸಿದ್ದೇವೆ. ಎಲ್ಲಾ ಚಿಂತಕರಿಗೂ ಪೊಲೀಸ್ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Loading...