ಮಾಸ್ತಿಗುಡಿ ದುರಂತ: ಮೃತರ ಕುಟುಂಬಗಳಿಗೆ ಸರ್ಕಾರದ ಅರ್ಥಿಕ ನೆರವು

ಬೆಂಗಳೂರು: ಮಾಸ್ತಿಗುಡಿ ಚಿತ್ರೀಕರಣ ದುರಂತದಲ್ಲಿ ಸಾವನ್ನಪ್ಪಿದ ಸಾಹಸ ಕಲಾವಿದರಾದ ಅನಿಲ್ ಮತ್ತು ಉದಯ್ ಅವರ ಕುಟುಂಬಗಳಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದೆ. ಪ್ರತಿ ಕುಟುಂಬಕ್ಕೆ ರೂ. 5 ಲಕ್ಷದ ಅರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ ಎಂದು ಸಿಎಂ ಕಛೇರಿ ಅಧಿಕಾರಿಗಳು ಹೇಳಿದ್ದಾರೆ.

ವ್ಯಾಸ ರಚಿತ ಮಹಾಭಾರತ

ಚಿತ್ರೀಕರಣ ವೇಳೆ ಹೆಲಿಕಾಪ್ಟರ್ ನಿಂದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಜಿಗಿದ ಸಾಹಸ ಕಲಾವಿದರಾದ ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ, ಸಹ ನಿರ್ದೇಶಕರನ್ನು ಪೊಲೀಸರು ವಸಕ್ಕೆ ಪಡೆದಿದ್ದಾರೆ. ಶನಿವಾರ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ ಪೊಲೀಸರ ಎದುರು ಶರಣಾದರು.

Related Post

error: Content is protected !!