ಜಿ.ಎಸ್.ಟಿ ಯಿಂದ ತಿಮ್ಮಪ್ಪನಿಗಿಲ್ಲ ವಿನಾಯಿತಿ – News Mirchi

ಜಿ.ಎಸ್.ಟಿ ಯಿಂದ ತಿಮ್ಮಪ್ಪನಿಗಿಲ್ಲ ವಿನಾಯಿತಿ

ಜಿ.ಎಸ್.ಟಿ(ಸರಕು ಸೇವಾ ತೆರಿಗೆ) ವ್ಯಾಪ್ತಿಯಿಂದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ದ ಸೇವೆಗಳಿಗೆ ವಿನಾಯ್ತಿ ನೀಡಲು ಸಾಧ್ಯವಿಲ್ಲವೆಂದು ಕೇಂದ್ರ ಆರ್ಥಿಕ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಅಗತ್ಯ ಬಿದ್ದರೆ ರಾಜ್ಯ ಮಟ್ಟದಲ್ಲಿ ಪರ್ಯಾಯ ಮಾರ್ಗಗಳನ್ನು ಮಾಡಿಕೊಳ್ಳಬಹುದು ಎಂದು ಅವರು ಸೂಚಿಸಿದರು.

ದೆಹಲಿ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ಜೇಟ್ಲಿ, ಟಿಟಿಡಿ ಸೇವೆಗಳನ್ನು ತೆರಿಗೆ ವಿನಾಯಿತಿ ವ್ಯಾಪ್ತಿಯಿಂದ ಹೊರಗಿಡಲು ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿತ್ತು. ಆದರೆ, ಈ ಮನವಿಯನ್ನು ಮನವಿಗೆ ಪೂರಕವಾಗಿ ತೀರ್ಮಾನ ಕೈಗೊಳ್ಳಲಾಗದು ಎಂದು ಎಂದು ಜೇಟ್ಲಿ ಹೇಳಿದ್ದಾರೆ. ಟಿಟಿಡಿ ಯನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಟ್ಟರೆ ಉಳಿದ ರಾಜ್ಯಗಳೂ ಕೂಡಾ ಇದೇ ರೀತಿಯ ಮನವಿಗಳನ್ನು ಮಾಡುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.

Contact for any Electrical Works across Bengaluru

Loading...
error: Content is protected !!