ಕಲ್ಲಡ್ಕ ಪ್ರಭಾಕರ ಭಟ್ ಬಂಧನವಾಗಲಿ: ದೇವೇಗೌಡ – News Mirchi

ಕಲ್ಲಡ್ಕ ಪ್ರಭಾಕರ ಭಟ್ ಬಂಧನವಾಗಲಿ: ದೇವೇಗೌಡ

ವಿಜಯಪುರ: ಕೊಲ್ಲೂರು ದೇವಸ್ಥಾನದಿಂದ ಕಲ್ಲಡ್ಕ ಪ್ರಭಾಕರ ಭಟ್ ಅವರ ಶ್ರೀರಾಮ ವಿದ್ಯಾ ಕೇಂದ್ರ ಶಾಲೆಗೆ ನೀಡುತ್ತಿದ್ದ ಅನುದಾನಕ್ಕೆ ಸರ್ಕಾರ ಕತ್ತರಿ ಹಾಕಿರುವುದನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಮರ್ಥಿಸಿಕೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಬಗ್ಗೆ ನನಗೆ ಗೊತ್ತು, ಸರ್ಕಾರ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಲ್ಲಡ್ಕ ಪ್ರಭಾಕರ ಭಟ್ ಅವರು ನಡೆಸುತ್ತಿದ್ದ ಶಾಲೆಗೆ ಸಿಗುತ್ತಿದ್ದ ಅನುದಾನವನ್ನು ಹಿಂತೆಗೆದುಕೊಂಡಿತ್ತು. ಆದರೆ ಸರ್ಕಾರದ ಈ ನಿರ್ಧಾರ ಸೇಡಿನ ಕ್ರಮವೆಂದು ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಹೇಳಿದಂತೆ ಭ್ರಷ್ಟಾಚಾರ ಮುಕ್ತ ಭಾರತ ಸಾಧ್ಯವಾಗಿಲ್ಲ ಎಂದು ಹೇಳಿದ ದೇವೇಗೌಡರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನವರ ವಿರುದ್ಧದ ಪ್ರಕರಣಗಳನ್ನು ರಾಜ್ಯ ಸರ್ಕಾರದ ಸೇಡಿನ ಕ್ರಮ ಎಂದು ಬಿಂಬಿಸುವುದು ಸರಿಯಲ್ಲ. ಇದನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಕಲ್ಲಡ್ಕ ಶಾಲೆಗೆ ಅನುದಾನ ರದ್ದು: ಪೂಜಾರಿ ಆಕ್ರೋಶ

ಕುಟುಂಬದಿಂದ ಹೆಚ್.ಡಿ.ಕುಮಾರ ಸ್ವಾಮಿ ಮತ್ತು ರೇವಣ್ಣ ಚುನಾವಣೆಗೆ ಹಾಸನ ಮತ್ತು ರಾಮನಗರದಿಂದ ಸ್ಪರ್ಧಿಸುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಪಕ್ಷಕ್ಕೆ ಇನ್ನೂ ದುಡಿಯಬೇಕಿದ್ದು, ಈ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

Contact for any Electrical Works across Bengaluru

Loading...
error: Content is protected !!