ಕುಮಾರಸ್ವಾಮಿಗೆ ಜಂತಕಲ್ ಉರುಳು, ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಜಂತಕಲ್ ಮೈನಿಂಗ್ ಅಕ್ರಮ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ಯವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಎಸ್.ಐ.ಟಿ ಕೋರ್ಟ್ ತಿರಸ್ಕರಿಸಿದೆ. ಇದಕ್ಕೂ ಮುನ್ನ ನಿರೀಕ್ಷಣಾ ಜಾಮೀನು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ಕೋರ್ಟ್ ಸಹಾ ವಜಾಗೊಳಿಸಿತ್ತು. ಇದರಿಂದಾಗಿ ಇದೀಗ ಕುಮಾರ ಸ್ವಾಮಿಯವರಿಗೆ ಬಂಧನ ಭೀತಿ ಎದುರಾಗಿದೆ.

ಬಂಧನದಿಂದ ಬಚಾವಾಗಲು ಕುಮಾರ ಸ್ವಾಮಿ ಅವರ ವಕೀಲರು ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಜಂತಕಲ್ ಮೈನಿಂಗ್ ಕಂಪನಿಗೆ ಕಾನೂನು ಉಲ್ಲಂಘಿಸಿ ಕಬ್ಬಿಣದ ಅದಿರನ್ನು ಸಾಗಿಸಲು ಅನುಮತಿ ನೀಡಿರುವ ಆರೋಪಗಳಿವೆ.

ಜಂತಕಲ್ ಮೈನಿಂಗ್ ಕಂಪನಿಯಿಂದ ಕುಮಾರ ಸ್ವಾಮಿ ರೂ. 150 ಕೋಟಿ ಲಂಚ ಪಡೆದಿದ್ದಾರೆ ಎಂದು ಜನಾರ್ಧನ ರೆಡ್ಡಿ 2007 ರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕ್ಷಿ ಇರುವುದಾಗಿಯೂ ಹೇಳಿಕೊಂಡಿದ್ದರು. ಇದೀಗ ಎಸ್.ಐ.ಟಿ ಮುಂದೆ ಹಾಜರಾಗಿರುವ ಜನಾರ್ಧನ ರೆಡ್ಡಿ,