ಪೇಜಾವರ ಶ್ರೀಗಳಿಗೆ ಯಶಸ್ವಿ ಹರ್ನಿಯಾ ಶಸ್ತ್ರಚಿಕಿತ್ಸೆ

ಉಡುಪಿ: ಹರ್ನಿಯಾ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಿಗೆ, ಇಂದು ಮಧ್ಯಾಹ್ನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ. ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆಗಾಗಿ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು.

ಹಲವು ದಿನಗಳಿಂದ ಶ್ರೀಗಳನ್ನು ಹರ್ನಿಯಾ ಸಮಸ್ಯೆ ಕಾಡುತ್ತಿದ್ದು, ಇದುವರೆಗೂ ವೈದ್ಯರೇ ಮಠಕ್ಕೆ ಬಂದು ಚಿಕಿತ್ಸೆ ನೀಡುತ್ತಿದ್ದರು. ಕೆಲ ದಿನಗಳ ಹಿಂದೆ ಪರೀಕ್ಷಿಸಿದ ವೈದ್ಯರು, ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು. ಹೀಗಾಗಿ ಇಂದು ಪೂಜಾ ಕಾರ್ಯಗಳನ್ನು ನೆರವೇರಿಸಿದ ಬಳಿಕೆ ಅಸ್ಪತ್ರೆಗೆ ದಾಖಲಾಗಿದ್ದರು.

ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲಿ ಎಂದು ಮಠದ ಶಿಷ್ಯರು ವಿಶೇಷ ಪೂಜೆಗಳನ್ನು ನಡೆಸಿದ್ದು, ಮುಸ್ಲಿಮರೂ ಕೂಡಾ ಶ್ರೀಗಳ ಶಸ್ತ್ರಚಿಕಿತ್ಸೆ ಸುಸೂತ್ರವಾಗಿ ನಡೆದು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದರು.