ಕುಮಾರಸ್ವಾಮಿ ಬಂಧನಕ್ಕೆ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ – News Mirchi

ಕುಮಾರಸ್ವಾಮಿ ಬಂಧನಕ್ಕೆ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿಯವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜೂನ್ 20 ರವರೆಗೆ ಅವರನ್ನು ಬಂಧಿಸದಂತೆ ಎಸ್.ಐ.ಟಿ ಅಧಿಕಾರಿಗಳಿಗೆ ಸೂಚಿಸಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಂತಕಲ್ ಮೈನಿಂಗ್ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ್ದಾರೆ ಎಂಬ ಆರೋಪ ಹೊತ್ತಿದ್ದು, ಇತ್ತೀಚೆಗಷ್ಟೇ ಲೋಕಾಯುಕ್ತ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ವಿಶೇಷ ನ್ಯಾಯಾಲಯದಲ್ಲಿ ಹಿನ್ನೆಡೆಯಾದ ಬಳಿಕ ನಿರೀಕ್ಷಣಾ ಜಾಮೀನಿಗಾಗಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರು ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೂ ಕುಮಾರಸ್ವಾಮಿಯವರನ್ನು ಬಂಧಿಸದಂತೆ ಎಸ್.ಐ.ಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Loading...