ಸರಣಿ ನಮ್ಮದೇ, ಅಗ್ರಸ್ಥಾನವನ್ನು ಉಳಿಸಿಕೊಂಡ ಭಾರತ – News Mirchi

ಸರಣಿ ನಮ್ಮದೇ, ಅಗ್ರಸ್ಥಾನವನ್ನು ಉಳಿಸಿಕೊಂಡ ಭಾರತ

ಧರ್ಮಶಾಲಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟೂರ್ನಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 8 ವಿಕೆಟ್‌ ಗಳಿಂದ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯನ್ನು ಭಾರತ 2-1 ಅಂತರದಿಂದ ಕೈವಶ ಮಾಡಿಕೊಂಡಿದೆ.

ಈ ಗೆಲುವಿನಿಂದಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ಅಗ್ರ ಸ್ಥಾನವನ್ನು ಉಳಿಸಿಕೊಂಡು, ಸತತ ಏಳು ಸರಣಿಗಳಲ್ಲಿ ಗೆಲುವು ಸಾಧಿಸಿದಂತಾಗಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಕ್ರಮಣಕಾರಿ ಆಟವಾಡಿದ್ದ ಕೆ.ಎಲ್.ರಾಹುಲ್ ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಭಾರಿಸಿದರು. ಎರಡನೇ ಇನ್ನಿಂಗ್ಸ್ ನಲ್ಲಿ ಪ್ರಮುಖ ಮೂರು ವಿಕೆಟ್ ಉರುಳಿಸಿದ ರವೀಂದ್ರ ಜಡೇಜಾ ಮ್ಯಾನ್ ಆಫ್ ದ ಮ್ಯಾಚ್ ಹಾಗೂ ಸರಣಿಯಲ್ಲಿ ಒಟ್ಟು 35 ಪಡೆದು ಸರಣಿ ಶ್ರೇಷ್ಠರಾಗಿದ್ದಾರೆ.

Loading...

Leave a Reply

Your email address will not be published.