ಕೊಹ್ಲಿ ಶತಕ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ – News Mirchi

ಕೊಹ್ಲಿ ಶತಕ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

ಐದನೆಯ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ಅಂತರದಿಂದ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದೆ. ಶ್ರೀಲಂಕಾ ನೀಡಿದ್ದ 239 ರನ್ ಗಳ ಗುರಿಯನ್ನು ಭಾರತ 46.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಇದರಿಂದಾಗಿ ಐದು ಏಕದಿನ ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದೆ.

ಭಾರತದ ಪರ ನಾಯಕ ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 110 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮತ್ತೊಂದು ಕಡೆ ಧೋನಿ ಒಂದು ರನ್ ಗಳಿಸಿ ಅಜೇಯರಾಗಿ ಉಳಿದರು. ಅದಕ್ಕೂ ಮುನ್ನಾ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮ 16, ರಹಾನೆ 5, ಪಾಂಡೆ 36, ಜಾಧವ್ 63 ರನ್ ಗಳಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಗೆ ಇಳಿದ ಶ್ರೀಲಂಕಾ 49.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 238 ರನ್ ಗಳಿಸಿತ್ತು.

ಈ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಭುವನೇಶ್ವರ್ ಐದನೆಯ ಏಕದಿನ ಪಂದ್ಯದಲ್ಲಿ ಮಾತ್ರ ಐದು ವಿಕೆಟ್ ಗಳಿಸಿದರು. ಇನ್ನು ಜಸ್ಪ್ರೀತ್ ಬುಮ್ರಾ ಎರಡು ವಿಕೆಟ್ ಪಡೆದು ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಆದರು.

ಭಾನುವಾರದ ಪಂದ್ಯದಲ್ಲಿ ಶ್ರೀಲಂಕಾ ಕ್ರಿಕೆಟರ್ ಧನಂಜಯ್ ನನ್ನು ಸ್ಟಂಪ್ ಔಟ್ ಮಾಡುವ ಮೂಲಕ ಏಕದಿನ ಪಂದ್ಯಗಳಲ್ಲಿ 100 ಸ್ಟಂಪೌಟ್ಸ್ ಮಾಡಿದ ಮಹೇಂದ್ರ ಸಿಂಗ್ ಧೋನಿ ಅಪರೂಪದ ದಾಖಲೆ ಮಾಡಿದರು.

Loading...