ಚಾಂಪಿಯನ್ಸ್ ಟ್ರೋಫಿ: ಸೆಮಿಫೈನಲ್ ಗೆ ಭಾರತ

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ತಲುಪಲು ಎರಡೂ ತಂಡಗಳಿಗೆ ಮಹತ್ವವಾಗಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳ ಗೆಲುವು ದಾಖಲಿಸಿದೆ. ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ 44.3 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ನಂತರ 192 ರನ್ ಗಳ ಗೆಲುವಿನ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ 38 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸುಲಭ ಗೆಲುವು ಸಾಧಿಸಿತು.

ಶಿಖರ್ ಧವನ್(78), ವಿರಾಟ್ ಕೊಹ್ಲಿ(76 ಅಜೇಯ), ಯುವರಾಜ್ ಸಿಂಗ್(23 ನಾಟೌಟ್) ಉತ್ತಮ ಪ್ರದರ್ಶನ ನೀಡಿದರು. ಇದರಿಂದಾಗಿ ನಾಕೌಟ್ ಪಂದ್ಯಗಳಲ್ಲಿ 2 ಗೆಲುವು ಕಂಡ ಭಾರತ ಕೊಹ್ಲಿ ಸೇನೆ ಸೆಮಿ ಫೈನಲ್ ಹಂತಕ್ಕೆ ತಲುಪಿದೆ.