ಇಂದೋರ್ ಎಕ್ಸ್‌ಪ್ರೆಸ್ ರೈಲು ದುರಂತ, 30 ಸಾವು

ಲಕ್ನೋ: ಉತ್ತರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಘೋರ ರೈಲು ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 30 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳು ಹೇಳುವ ಪ್ರಕಾರ… ಉತ್ತರ ಪ್ರದೇಶದ ದೇಹತ್ ಜಿಲ್ಲೆಯ ಕಾನ್ಪುರ ಸಮೀಪದ ಪುಖ್ರಯಾನ್ ಬಳಿ ಪಾಟ್ನಾ- ಇಂದೋರ್ ಎಕ್ಸ್ ಪ್ರೆಸ್ ರೈಲಿನ 14 ಬೋಗಿಗಳು ಹಳಿ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

41479605665_625x300ಮಾಹಿತಿ ತಿಳಿದ ಕೂಡಲೇ ವೈದ್ಯ ಸಿಬ್ಬಂದಿ ದುರಂತ ನಡೆದ ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ರೈಲ್ವೇ ಅಧಿಕಾರಿ ಅನಿಲ್ ಸಕ್ಸೇನಾ ಹೇಳಿದ್ದಾರೆ. ರೈಲು ದುರಂತಕ್ಕೀಡಾದ ನಂತರ ಈ ಮಾರ್ಗದ ಮೂಲಕ ಹೋಗುವ ರೈಲುಗಳ ಸಂಚಾರ ಸ್ಥಗಿತಗೊಳಿಸಿದ್ದಾರೆ. ಸಿಬ್ಬಂದಿ ರಕ್ಷಣಾ ಕಾರ್ಯ ಮುಂದುವರೆಸಿದ್ದು, ಮೃತರ ಸಂಖ್ಯೆ ಏರುವ ಸಾಧ್ಯತೆ ಇದೆ.