ಚಿಕಿತ್ಸೆ ಫಲಿಸದೆ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಸಾವು – News Mirchi

ಚಿಕಿತ್ಸೆ ಫಲಿಸದೆ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಸಾವು

ಮಂಗಳವಾರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಬಿಸಿ ರಸ್ತೆಯಲ್ಲಿ ಲಾಂಡ್ರಿ ಸರ್ವೀಸ್ ಇಟ್ಟುಕೊಂಡಿದ್ದ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮೇಲೆ ಮಂಗಳವಾರ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಇದಕ್ಕೂ ಮುನ್ನ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಮುಂತಾದವರನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಶಕ್ಕೆ ಪಡೆದಿದ್ದಾರೆ. 144 ಸೆಕ್ಷನ್ ಜಾರಿಯಿದ್ದರೂ ಬಿಜೆಪಿ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ಮುಂದಾಗಿದ್ದರು.

ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಪದ್ಮನಾಭ ಕೊಟಾರಿ, ಹಿಂದೂ ಮುಖಂಡ ರಾಜೇಶ್ ನಾಯಕ್, ದೇವದಾಸ್ ಶೆಟ್ಟಿ, ಜಗದೀಶ್ ಅಧಿಕಾರಿ, ಜಿ ಆನಂದ್, ಜಿತೇಂದ್ರ ಕೊಟಾರಿ, ಸಾವಿರಾರು ಹಿಂದೂ ಪರ ಕಾರ್ಯಕರ್ತರು ಮಂಗಳೂರು, ಸುಳ್ಯ, ಪುತ್ತೂರುಗಳಿಂದ ಪ್ರತಿಭಟನೆಗೆ ಆಗಮಿಸಿದ್ದರು ಎಂದು ದಕ್ಷಿಣ ಕನ್ನಡ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

144 ಕಾಯ್ದೆಯನ್ನು ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದ ಸುಮಾರು 500 ಕ್ಕಿಂತ ಹೆಚ್ಚು ಜನರ ವಿರುದ್ಧ ಪೊಲೀಸರು 143 ಮತ್ತು 149 ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಪ್ರತಿಭಟನೆಯ ಕಾರಣ ಕೆಲ ಗಂಟೆಗಳ ಕಾಲ ಹೆದ್ದಾರಿ ಸ್ತಭ್ದವಾಗಿತ್ತು.

Loading...