ಒತ್ತಡಗಳಿಗೆ ಮಣಿದ ಕೇಂದ್ರ: ಜಲ್ಲಿಕಟ್ಟುಗೆ ಸುಗ್ರೀವಾಜ್ಞೆ

ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಶುಕ್ರವಾರ ರಾತ್ರಿ ತೀರ್ಮಾನಿಸಿದೆ. ಕೆಲ ಬದಲಾವಣೆಗಳೊಮದಿಗೆ ತಮಿಳುನಾಡು ಸುಗ್ರೀವಾಜ್ಞೆಗೆ ಕೇಂದ್ರ ಕಾನೂನು ಸಚಿವಾಲಯ ಅನುಮೋದನೆ ನೀಡಿದೆ.

ನಾಲ್ಕು ದಿನಗಳಿಂದ ಜಲ್ಲಿಕಟ್ಟು ಮೇಲಿನ ನಿಷೇಧ ವಿರೋಧಿಸಿ ತಮಿಳಿಗರು ನಡೆಸುತ್ತಿದ್ದ ಪ್ರತಿಭಟನೆಗಳಿಗೆ ಕೇಂದ್ರ ತಲೆ ಬಾಗಿದೆ. ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿದ್ದು, ರಾಷ್ಟ್ರಪತಿಗಳ ಅಂಗೀಕಾರ ದೊರೆತ ಕೂಡಲೇ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.

ನಿಷೇಧ ರದ್ದುಗೊಳಿಸುತ್ತಿದ್ದಂತೆ ಮರೀನಾ ಬೀಚ್ ನಲ್ಲಿ ಜನ ಸಂಭ್ರಮಾಚಾರಣೆ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆಗಾಗಿ ಮರೀನಾ ಬೀಚ್ ನಲ್ಲಿ ವಿದ್ಯಾರ್ಥಿಗಳು ನಾಲ್ಕು ದಿನಗಳಿಂದ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆಗೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿತ್ತು. ಶುಕ್ರವಾರ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿದ್ದವು. ಮತ್ತೊಂದು ಕಡೆ ಅಣ್ಣಾಡಿಎಂಕೆ ಸಂಸದರು, ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ದೆಹಲಿಗೆ ತೆರಳಿ ಕೇಂದ್ರದ ಮೇಲೆ ಒತ್ತಡ ತಂದಿದ್ದರು‌. ಹೀಗಾಗಿ ಕೇಂದ್ರ ಸರ್ಕಾರ ಕೆಳಗಿಳಿದು ಬರಬೇಕಾಯಿತು.

Related News

Loading...

Leave a Reply

Your email address will not be published.

error: Content is protected !!