ನಿಮ್ಮನ್ನು ಕೆಳಗಿಳಿಸಲೆಂದೇ ಅಮಿತ್ ಶಾ ಬಂದಿರುವುದು – News Mirchi
We are updating the website...

ನಿಮ್ಮನ್ನು ಕೆಳಗಿಳಿಸಲೆಂದೇ ಅಮಿತ್ ಶಾ ಬಂದಿರುವುದು

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಗ್ಗೆ ಹೈಕಮಾಂಡ್ ನಲ್ಲಿ ಉತ್ತಮ ಅಭಿಪ್ರಾಯವಿರುವುದರಿಂದ ಅವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಬರಪೀಡಿದ ಪ್ರದೇಶಗಳಿಗೆ ಹೋಗಲು ನಿಮಗೆ ಸಮಯವಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆಯೊಳಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಿಮ್ಮನ್ನು ಕುರ್ಚಿಯಿಂದ ಕೆಳಗಿಳಿಸಲೆಂದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಬಂದಿರುವುದು. ಈಗಾಗಲೇ ಅವರು ಭೇಟಿ ನೀಡಿರುವ 18 ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಕೆಳಗಿಳಿಸಿದ್ದಾರೆ ಎಂದು ಎಚ್ಚರಿಸಿದರು. [ಕಲ್ಲಡ್ಕ ಶಾಲೆಗೆ ಅನುದಾನ ರದ್ದು: ಪೂಜಾರಿ ಆಕ್ರೋಶ]

ಮತ್ತೊಂದೆಡೆ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನನಗೆ ನೀಡಿರುವ ಹೊಣೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದು ಹೇಳಿದ್ದಾರೆ.

Contact for any Electrical Works across Bengaluru

Loading...
error: Content is protected !!