ಸಿದ್ದರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ: ಪೂಜಾರಿ

ಸಮಯ ಬಂದಾಗಲೆಲ್ಲಾ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ವೈಖರಿ ವಿರುದ್ಧ ಚಾಟಿ ಬೀಸುವ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ, ಈ ಬಾರಿ ಸಿದ್ದರಾಮಯ್ಯ ಅವರ ದುರಹಂಕಾರ ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರ ಮಿತಿ ಮೀರಿದೆ, ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ, ಅವರು ಪಕ್ಷದಿಂದ ಹೋಗುವವರೆಗೂ ಪಕ್ಷಕ್ಕೆ ಒಳಿತಾಗುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, ಹೌದು ಎಸ್.ಎಂ.ಕೃಷ್ಣ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ.  ಆದರೆ ಅವರು ರಾಜೀನಾಮೆ ನೀಡಬಾರದಿತ್ತು. ಎಸ್.ಎಂ.ಕೃಷ್ಣ ರಾಜಿನಾಮೆಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಗಂಡಾಂತರ ಬರಲಿದೆ ಎಂದು ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ.

Loading...

Leave a Reply

Your email address will not be published.

error: Content is protected !!