ಜಯಾ ಆರೋಗ್ಯ ಕುರಿತು ಕೇಂದ್ರ ಅರೋಗ್ಯ ಸಚಿವರ ಪ್ರಕಟಣೆ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆಪಿ ಹೇಳಿಕೆ ನಡ್ಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಜಯಲಲಿತಾ ಅಪಾಯದಿಂದ ಪಾರಾಗಿದ್ದಾರೆ, ಆದಾಗ್ಯೂ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಜಯಲಲಿತಾ ಆರೋಗ್ಯ ಸ್ಥಿತಿ ಕುರಿತು ಚೆನ್ನೈನ ಅಪೋಲೋ ಆಸ್ಪತ್ರೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ದೆಹಲಿಯ ಏಮ್ಸ್ ವೈದ್ಯರ ತಂಡವನ್ನು ಚೆನ್ನೈಗೆ ಕಳುಹಿಸಿದ್ದೇವೆ. ಅವರು ಆಕೆಯ ತನ್ನ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಾರೆ, ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತಾರೆ ಎಂದರು.