ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ಬೆಂಬಲ ಕಾಂಗ್ರೆಸ್ ಅಭ್ಯರ್ಥಿಗೆ

ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗುಂಪಿನಿಂದ ಆಯ್ಕೆಯಾದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಬೆಂಬಲಿಸಲು ಜ್ಯಾತ್ಯಾತೀತ ಜನತಾದಳ ತೀರ್ಮಾನಿಸಿದೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗುಂಪಿನಿಂದ ಆಯ್ಕೆಯಾದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಬೆಂಬಲಿಸಲು ಜ್ಯಾತ್ಯಾತೀತ ಜನತಾದಳ ತೀರ್ಮಾನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಜೆಡಿಎಸ್ ನಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದು, ಜೆಡಿಎಸ್ ಬೆಂಬಲಿಸಲು ಅಂಗೀಕರಿಸಿದೆ. ಕಾಂಗ್ರೆಸ್ ಮತ್ತು ಮಿತ್ರಪಕ್ಷಳು ಕಣಕ್ಕಿಳಿಸುತ್ತಿರುವ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರ ನಾಮಪತ್ರಕ್ಕೆ ಕುಮಾರಸ್ವಾಮಿ ಬೆಂಬಲ ಸೂಚಕರಾಗಿ ಸಹಿ ಮಾಡಿದ್ದಾರೆ. ಈಗಾಗಲೇ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ರವರು, ಸಮಸದ ಪುಟ್ಟರಾಜು, ಶಾಸಕ ಮಧು ಬಂಗಾರಪ್ಪ ಮತ್ತು ಗೋಪಾಲಯ್ಯ ಅವರಿಂದಲೂ ಸಹಿ ಹಾಕಿಸಲಾಗಿದೆ.

ಜೆಡಿಎಸ್ ಕೈಯಲ್ಲಿ 40 ಶಾಸಕರು ಮತ್ತು ಇಬ್ಬರು ಸಂಸದರ ಬಲವಿದೆ. ಆದರೆ ಈಗಾಗಲೇ 8 ಜನ ಬಂಡಾಯ ಶಾಸಕರನ್ನು ಜೆಡಿಎಸ್ ಅನರ್ಹಗೊಳಿಸಿದೆ.

ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಪ್ರತಿಪಕ್ಷಗಳ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಈಗಾಗಲೇ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ.