ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ

ನಂಜನಗೂಡು ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಮೊದಲು ಜೆಡಿಎಸ್ ನಿಂದ ಕಳಲೆ ಕೇಶವಮೂರ್ತಿ ಅವರನ್ನು ಪಕ್ಷದಿಂದ ಕಣಕ್ಕಿಳಿಸಲು ತೀರ್ಮಾನಿಸಲಾಗಿತ್ತು. ಆದರೆ ಕಾಂಗ್ರೆಸ್ ಅವರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಅಷ್ಟೇ ಅಲ್ಲದೇ ಚುನಾವಣೆ ನಡೆದರೂ ಆಡಳಿತಾವಧಿ ಕೇವಲ 6 ತಿಂಗಳುಗಳು ಮಾತ್ರ. ಹಾಗಾಗಿ ತಾವು ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದರು. ಜನವರಿ 24 ರಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಈ ಕುರಿತು ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

Related News

Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache