ಪಿಎಫ್ಐ ಬೆನ್ನಿಗೆ ನಿಂತ ಕಾಂಗ್ರೆಸ್ ಉಸ್ತುವಾರಿ |News Mirchi

ಪಿಎಫ್ಐ ಬೆನ್ನಿಗೆ ನಿಂತ ಕಾಂಗ್ರೆಸ್ ಉಸ್ತುವಾರಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಪಕ್ಷ ಒತ್ತಾಯಿಸುತ್ತಿದ್ದರೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪಿಎಫ್ಐ ಬೆನ್ನಿಗೆ ನಿಂತಿದ್ದಾರೆ. ಪಿಎಫ್ಐ ಸಂಘಟನೆಯನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಅವರು ಕರಾವಳಿಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳಲ್ಲಿ ಬಿಜೆಪಿ ಮತ್ತು ಆರ್.ಎಸ್.ಎಸ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಕೋಮು ಭಾವನೆ ಕೆರಳಿಸಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಆರ್.ಎಸ್.ಎಸ್ ಮತ್ತು ಬಿಜೆಪಿಗೆ ಬುದ್ದಿವಂತರಾದ ಕರ್ನಾಟಕದ ಜನರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ರಾಜ್ಯದ ಜನತೆ ಸೂಕ್ತ ಪಾಠ ಕಲಿಸುತ್ತಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇನ್ನು ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿರುವ ಅವರು, ಹಿಂದಿನ ಬಾರಿಗಿಂತ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

Loading...
loading...
error: Content is protected !!